ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಂಗಳೂರು ನಗರ ಪರಿವೀಕ್ಷಣೆಯ ನಂತರ ನಡೆದ ಮಾನ್ಯ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು...

know_the_cm

ಗೃಹ ಕಚೇರಿ ಕೃಷ್ಣಾ, (ಬೆಂಗಳೂರು), ಸೆಪ್ಟೆಂಬರ್ 08, 2019

1. ಬೆಂಗಳೂರು ನಗರ ಇಂದು ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ನಗರವಾಗಿದೆ.

2. ಅದಕ್ಕೆ ತಕ್ಕಂತೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದುದು.

know_the_cm

3. ಈ ನಿಟ್ಟಿನಲ್ಲಿ ನಗರದ ಸಮಸ್ಯೆಗಳನ್ನು, ವಸ್ತುಸ್ಥಿತಿಯನ್ನು ಅರಿಯಲು ನಾನು ಇಂದು ಬೆಳಿಗ್ಗೆಯಿಂದ ಇಲ್ಲಿಯ ವರೆಗೆ ಸುಮಾರು ಮೂರು-ನಾಲ್ಕು ಗಂಟೆಗಳ ಕಾಲ ನಗರ ಪರಿವೀಕ್ಷಣೆ ನಡೆಸಿದ್ದೇನೆ.

4. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಭಾನುವಾರ ರಜಾ ದಿನ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.

know_the_cm

5. ನನ್ನ ಜೊತೆಗೆ ಉಪಮುಖ್ಯಮಂತ್ರಿ ಶ್ರೀ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಶ್ರೀ ಆರ್. ಅಶೋಕ್, ಗೃಹ ಸಚಿವ ಶ್ರೀ ಬಸವರಾಜ ಬೊಮ್ಮಾಯಿ, ಮೇಯರ್ ಶ್ರೀಮತಿ ಗಂಗಾಂಬಿಕೆ ಮಲ್ಲಿಕಾರ್ಜುನ್, ಸಂಸದ ಶ್ರೀ ಪಿ.ಸಿ. ಮೋಹನ್, ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ, ಶ್ರೀ ಎಸ್. ರಘು, ಶ್ರೀ ಸತೀಶ್ ರೆಡ್ಡಿ, ನನ್ನ ಸಲಹೆಗಾರರಾದ ಶ್ರೀ ಎಂ. ಲಕ್ಷ್ಮೀನಾರಾಯಣ, ಬಿಬಿಎಂಪಿ ಆಯುಕ್ತ ಶ್ರೀ ಬಿ.ಹೆಚ್. ಅನಿಲ್ ಕುಮಾರ್, ಬಿಡಿಎ, ಜಲಮಂಡಳಿ ಅಧಿಕಾರಿಗಳು, ಬಿಎಂಆರ್ಸಿಎಲ್ ಅಧಿಕಾರಿಗಳು ಆಗಮಿಸಿದ್ದರು.

6. ಈ ಸಂದರ್ಭದಲ್ಲಿ ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಕಾಡುಬೀಸನಹಳ್ಳಿ, ಮಾರತಹಳ್ಳಿ, ಟಿನ್ ಫ್ಯಾಕ್ಟರಿ, ಭಾಗಗಳಲ್ಲಿ ಪರಿವೀಕ್ಷಣೆ ನಡೆಸಿದ್ದೇನೆ.

7. ಈ ಸಂದರ್ಭದಲ್ಲಿ ಬನ್ನೇರುಘಟ್ಟ ರಸ್ತೆಯ ಮೆಟ್ರೋ ಮೇಲುಸೇತುವೆ, ಮಾರೇನಹಳ್ಳಿ ರಸ್ತೆಯಲ್ಲಿ ಮೆಟ್ರೋ ಮತ್ತು ರಸ್ತೆ ಕಾಮಗಾರಿ, ಜಯದೇವ ಆಸ್ಪತ್ರೆ ಜಂಕ್ಷನ್ ಮೆಟ್ರೋ ನಿಲ್ದಾಣ ಕಾಮಗಾರಿಗಳನ್ನು ಪರಿಶೀಲನೆ ನಡೆಸಲಾಯಿತು. 2021ರೊಳಗೆ ಇಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ಸೇವೆ ಪ್ರಾರಂಭಿಸುವ ಗುರಿಯೊಂದಿಗೆ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೇನೆ.

8. ಮೆಟ್ರೋ ಕಾಮಗಾರಿ ನಡೆಸುವ ಸ್ಥಳಗಳಲ್ಲಿ ರಸ್ತೆ ಮತ್ತು ಫುಟ್ ಪಾತ್ಗಳ ದುರಸ್ತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

9. ಸಂಚಾರ ದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಪರ್ಯಾಯ ರಸ್ತೆಗಳನ್ನು ಗುರುತಿಸಿ, ಅವುಗಳನ್ನು ಸುಸ್ಥಿತಿಯಲ್ಲಿಡುವಂತೆ ಹಾಗೂ ಒತ್ತುವರಿಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.

know_the_cm

10. ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆಯಿಂದ ಬರುವ ಜಲಮಂಡಳಿಯ ಸ್ಯಾನಿಟರಿ ಪಂಪಿಂಗ್ ಲೈನ್ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು.

11. ನಂತರ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಗೆ ಭೇಟಿ ನೀಡಲಾಯಿತು. ಅಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ರೂಪಿಸಿರುವ ಯೋಜನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.

12. ನಗರದ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಜಂಕ್ಷನ್ಗಳಲ್ಲಿ ಇದು ಒಂದಾಗಿದೆ. ಆದ್ದರಿಂದ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

know_the_cm

13. ವೈಟ್ ಫೀಲ್ಡ್ ಕಾರಿಡಾರ್ ನ ಕೆ.ಆರ್.ಪುರಂ ನಲ್ಲಿ ಮೆಟ್ರೋ ಕಾಮಗಾರಿಗಳನ್ನು ಪರಿಶೀಲಿಸಿದೆ. ಔಟರ್ ರಿಂಗ್ ರಸ್ತೆ ಮತ್ತು ಓಲ್ಡ್ ಮದ್ರಾಸ್ ರಸ್ತೆ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಬಸ್, ರೈಲ್ವೆ ಹಾಗೂ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕಿಸಲು ರೂಪಿಸಿರುವ ಯೋಜನೆಯ ಕುರಿತು ಚರ್ಚಿಸಲಾಯಿತು.

14. ಈ ಕುರಿತು ಸವಿವರವಾದ ಯೋಜನಾ ವರದಿ ಸಿದ್ಧಪಡಿಸಿ, ಸರ್ಕಾರದ ಅನುಮೋದನೆಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ.

15. ವೈಟ್ ಫೀಲ್ಡ್ ಮೆಟ್ರೋ ಲೈನ್ ಕಾಮಗಾರಿಯನ್ನು 2021ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

16. ಹೆಬ್ಬಾಳ ಜಂಕ್ಷನ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಬ್ಬಾಳದಲ್ಲಿ ಮೇಲು ಸೇತುವೆಗೆ 5 ಲೇನ್ ಸೇರ್ಪಡೆ ಮತ್ತು ಅಂಡರ್ಪಾಸ್ ನಿರ್ಮಾಣದ ಕುರಿತು ರೈಟ್ಸ್ ಸಂಸ್ಥೆಯವರು ಅಧ್ಯಯನ ನಡೆಸುತ್ತಿದ್ದಾರೆ. ಈ ಅಧ್ಯಯನ ವರದಿಯನ್ನು ಶೀಘ್ರವೇ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ.

17. ಈ ಸಂದರ್ಭದಲ್ಲಿ ಸಿಲ್ಕ್ ಬೋರ್ಡ್ ಯಿಂದ ಕೆ.ಆರ್.ಪುರ, ಹೆಬ್ಬಾಳ ಮೂಲಕ ನಿರ್ಮಿಸಲಾಗುತ್ತಿರುವ ಔಟರ್ ರಿಂಗ್ ರಸ್ತೆ- ವಿಮಾನ ನಿಲ್ದಾಣ ಮೆಟ್ರೋ ಕಾಮಗಾರಿ ಕುರಿತು ಸಹ ಚರ್ಚಿಸಲಾಯಿತು.

18. ಒಟ್ಟು 56 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ ಭೂಸ್ವಾಧೀನ ಹಾಗೂ ಮೂಲಸೌಕರ್ಯಗಳ ಸ್ಥಳಾಂತರಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಮುಂದಿನ ಎರಡು ತಿಂಗಳೊಳಗಾಗಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡುವಂತೆ ನಿರ್ದೇಶನ ನೀಡಿದ್ದೇನೆ.

know_the_cm

19. ಇದಕ್ಕೆ ಭಾರತ ಸರ್ಕಾರದಿಂದ ಶೀಘ್ರವೇ ಅನುಮೋದನೆ ಪಡೆದುಕೊಳ್ಳಲು ಸರ್ಕಾರ ಕ್ರಮ ವಹಿಸಲಿದೆ.

20. ಕುಂದಲಹಳ್ಳಿ ಜಂಕ್ಷನ್ ನಲ್ಲಿ ಬಿಬಿಎಂಪಿಯಿಂದ ಅಂಡರ್ ಪಾಸ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ್ದೇನೆ.

21. ಕುಂದಲಹಳ್ಳಿ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಅಗತ್ಯವಿರುವ 45 ಕೋಟಿ ರೂ. ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು.

22. ಕಾಡುಬೀಸನಹಳ್ಳಿಯಲ್ಲಿ ಔಟರ್ ರಿಂಗ್ ರೋಡ್ ಕಂಪನೀಸ್ ಅಸೋಸಿಯೇಷನ್ ಪ್ರತಿನಿಧಿಗಳ ಜೊತೆ ಸಂಚಾರ ಸಮಸ್ಯೆ ಮತ್ತು ಇತರ ಮೂಲಸೌಕರ್ಯಗಳ ಸಮಸ್ಯೆಗಳನ್ನು ಕುರಿತಾಗಿ ಚರ್ಚಿಸಿದ್ದೇವೆ.

23. ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಟ್ರಾಫಿಕ್ ಜಾಮ್ನಿಂದ ಸಾಫ್ಟ್ವೇರ್ ಕಂಪೆನಿಗಳಿಗೆ ಪ್ರತಿವರ್ಷ 1000 ಕೋಟಿ ರೂ. ನಷ್ಟವಾಗುತ್ತಿದೆ. ಜನಸಂಖ್ಯೆ ಹೆಚ್ಚಿದಂತೆ ರಸ್ತೆಗಳ ವಿಸ್ತೀರ್ಣ ಸಾಕಾಗುತ್ತಿಲ್ಲ ಎಂದು ಮನವಿ ಮಾಡಿದ್ದಾರೆ.

24. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿಯನ್ನು ವೇಗವಾಗಿ ಮಾಡಲು ಸೂಚನೆ ನೀಡಿದ್ದೇನೆ. ಅಲ್ಲದೆ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಶೀಘ್ರವೇ ಕೈಗೆತ್ತಿಕೊಳ್ಳಲು ಸೂಚನೆ ನೀಡಿದ್ದೇನೆ.

25. ರಸ್ತೆಗಳ ಅಭಿವೃದ್ಧಿಗೆ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

26. ಬೆಳ್ಳಂದೂರು ಕೆರೆ ಅಭಿವೃದ್ಧಿಗೆ 200 ಕೋಟಿ ರೂ. ಒದಗಿಸಲಾಗಿದ್ದು, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

27. ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ನಗರದ ಒಂದೊಂದು ಭಾಗಕ್ಕೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡಲಿದ್ದೇನೆ.

28. ಒಟ್ಟಾರೆಯಾಗಿ ನಗರವನ್ನು ಮುಂದಿನ ದಿನಗಳಲ್ಲಿ ವಿಶ್ವದರ್ಜೆಯ ನಗರವಾಗಿ ರೂಪಿಸುವ ಗುರಿ ಹೊಂದಿದ್ದೇವೆ.

know_the_cm

29. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಬಯಸುತ್ತೇನೆ.

*************

1. Today I conducted a city rounds and inspected various developmental works including Metro.

2. Deputy Chief Minister Dr. C.N. Ashwathnarayana, Revenue Minister Shri R. Ashok, Home Minister Shri Basavaraja Bommai, Mayor Smt. Gangambike Mallikarjun, MP Shri P.C. Mohan, MLAs Shri Aravinda Limbavali, Shri S. Raghu, Shri Satish Reddy, Advisor Shri M. Lakshminarayana, BMRCL MD Shri Ajay Seth, BBMP Commissioner Shri B.H. Anil Kumar, Officers from BDA, BWSSB., BMRCL were present.

3. I have visited Bannerghatta Road, Silk Board Junction, Kadubisanahalli, Marathalli, Tinfactory and Hebbal.

4. We visited Metro works of elevated corridor at Bannerghatta Road, Metro cum Road works at Jayadeva Hospital Junction.

5. I directed the officials to expedite the works so as to commissioning the Electronic City Metro within year 2021.

6. I have also instructed them to improve conditions of the roads and footpaths where Metro work is going on. I have impressed on all concerned civic agencies to maintain alternative roads for the traffic in good condition and free of encroachment.

7. Then I visited Central Silk Board (CSB) junction and was briefed about the measures undertaken and planned for easing traffic congestion by constructing flyover loops from Metro cum Road, establishing two bus stands.

8. I have directed them to complete the detailed design and tender process at the earliest as this junction is one of three most congested junctions in the city, each getting 4 lakh passenger car units (PCU) equivalent of traffic every day.

9. Thereafter I visited Metro works of Whitefield corridor at K.R.Puram. We discussed about the detailed plan prepared for augmenting road infrastructure at ORR-OMR section (K.R.Puram - Tin Factory - Benganahalli Flyover).

10. The plan envisages building two metro lines for Whitefield and to Airport, 2-lane one-way flyover at Benginahalli, and minimum of 5 to 6 lane road in either side of this section.

11. I have directed to submit the full proposal for approval by the government and to take up all pre-project activities and also to complete Whitefield Metro line within year 2021.

12. We visited Hebbal junction and was briefed about the detailed study done by RITES for long-term capacity augmentation by adding another 5 lanes at the flyover and building underpasses for the traffic.

13. I have directed to expedite final report by RITES and submit the proposal to the government within next 3 months.

14. We held discussion about the ORR-Airport Metro from Central Silk Board via K.R.Puram and Hebbal and about advance actions taken for land acquisition and utility shifting on the entire 56 km length of the corridor.

15. I inspected kundalahalli junction where underpass is proposed to be constructed by BBMP.

16. On this occasion I had discussion with Outer Ring Road Companies Association and addressed them about the initiatives being taken up by our Government to resolve traffic congestion and other infrastructure issues.

17. I have decided to go on city rounds every 15 days and address public grievances on the spot and to inspect various development projects.

18. We intend to make Bangalore world class city and we will work towards achieving this goal.

*************