ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪರಿಶಿಷ್ಟ ಪಂಗಡಕ್ಕೆ 7.5 ರಷ್ಟು ಮೀಸಲಾತಿ: ಸಮಿತಿ ರಚಿಸಿ ತೀರ್ಮಾನ - ಮುಖ್ಯಮಂತ್ರಿ

know_the_cm

ಗೃಹ ಕಚೇರಿ ಕೃಷ್ಣಾ, (ಬೆಂಗಳೂರು), ಸೆಪ್ಟೆಂಬರ್ 09, 2019

-ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಚರ್ಚಿಸಿದರು.

-ವಾಲ್ಮೀಕಿ ಸಮಾಜಕ್ಕೆ ಶೇ. 7.5 ರಷ್ಟು ಮೀಸಲಾತಿಯನ್ನು ನೀಡಬೇಕೆಂಬ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಸಮಿತಿ ರಚಿಸಿ, ಅದರ ವರದಿಯನ್ನಾಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

-ಸಚಿವ ಸಂಪುಟದ ಸಭೆಯ ಮುಂದೆಯೂ ವಿಷಯವನ್ನು ತಂದು ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

-ವಾಲ್ಮೀಕಿ ಜನಸಂಖ್ಯೆ ರಾಜ್ಯ ಜನಸಂಖ್ಯೆ ಯ 7 ರಷ್ಟಿದೆ, ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

know_the_cm

*************