ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಮಂತ್ರಿ ಸುರೇಶ್ ಅಂಗಡಿ ಜೊತೆ ನಡೆದ ಸಭೆಯ ಮುಖ್ಯಾಂಶಗಳು...

know_the_cm

ವಿಧಾನಸೌಧ, (ಬೆಂಗಳೂರು), ಸೆಪ್ಟೆಂಬರ್ 09, 2019

-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೇ ಯೋಜನೆಗಳು ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಹಾಗು ಮೆಟ್ರೋ ರೈಲುಗಳ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಹಾಗು ಇತರೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಸಭೆಯ ಮುಖ್ಯಾಂಶಗಳು:

-ಶಿವಮೊಗ್ಗ ಔಟರ್ ರಿಂಗ್ ರಸ್ತೆ ಸಮೀಪ ರಸ್ತೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಜಾಗ ನೀಡಲು ಒಪ್ಪಿಗೆ.

-ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಆರಂಭಿಕ ಕೆಲಸಕ್ಕೆ ಒಪ್ಪಿಗೆ.

-ಶಿವಮೊಗ್ಗ - ಯಶವಂತಪುರ ಇಂಟರ್ ಸಿಟಿ ರೈಲು ಸಂಚಾರ ಚೆನ್ನೈವರೆಗೆ ವಿಸ್ತರಣೆಗೆ ತಾತ್ವಿಕ ಒಪ್ಪಿಗೆ.

-ಶಿವಮೊಗ್ಗ - ತಿರುಪತಿ ರೈಲು ಬೀರೂರು, ಚಿತ್ರದುರ್ಗ, ಬಳ್ಳಾರಿ ಮಾರ್ಗದಲ್ಲಿ ಸಂಚರಿಸಲು ತಾತ್ವಿಕ ಒಪ್ಪಿಗೆ.

-ಶಿವಮೊಗ್ಗ ಮತ್ರು ಯಶವಂತಪುರ ನಡುವೆ ಸಂಚಾರ ಮಾಡುವ ಶತಾಬ್ದಿ ರೈಲಿನ ಸಮಯ ಬದಲಾವಣೆ ಕುರಿತು ಚರ್ಚಿಸಲಾಯಿತು.

-ಬೀರೂರು - ಶಿವಮೊಗ್ಗ ರೈಲು ಮಾರ್ಗದ ಡಬ್ಲಿಂಗ್ ಕಾಮಗಾರಿ ಸಧ್ಯದಲ್ಲೇ ಆರಂಭಿಸಲು ಸೂಚನೆ.

-ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಬಗ್ಗೆ ಚರ್ಚೆ ನಡೆಸಲಾಯಿತು.

-ಮೆಟ್ರೋ ಕಾಮಗಾರಿಗಳಿಗೆ ರೈಲ್ವೆ ಇಲಾಖೆಯು ಸಹಕರಿಸುವಂತೆ ಮನವಿ ಮಾಡಲಾಯಿತು.

know_the_cm

*************