ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನೆರೆ ಪ್ರದೇಶಗಳ ಮರು ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮುಖ್ಯಮಂತ್ರಿಗಳು ನೀಡಿದ ಕರೆಗೆ ಎನ್.ಎಸ್.ಎಸ್.ಸ್ವಯಂ ಸೇವಕರಿಂದ ಅತ್ಯುತ್ಸಾಹದ ಪ್ರತಿಕ್ರಿಯೆ

know_the_cm

(ಬೆಂಗಳೂರು), ಸೆಪ್ಟೆಂಬರ್ 11, 2019

-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಕುರಿತು ಬರೆದಿರುವ ಲೇಖನಕ್ಕೆ ಯುವಜನರಿಂದ ಅತ್ಯುತ್ಸಾಹದ ಪ್ರತಿಕ್ರಿಯೆ ದೊರೆತಿದೆ.

-ರಾಜ್ಯದಾದ್ಯಂತ ಇರುವ 41 ಎನ್.ಎಸ್.ಎಸ್ ಘಟಕಗಳ ಸ್ವಯಂ ಸೇವಕರು, ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ನೆರೆ ಪೀಡಿತ ಪ್ರದೇಶಗಳ ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ.

-ಎನ್.ಎಸ್.ಎಸ್ನ ರಾಜ್ಯ ಸಮನ್ವಯಾಧಿಕಾರಿ ಡಾ: ಗಣನಾಥಶೆಟ್ಟಿ ಅವರು ಮುಖ್ಯಮಂತ್ರಿಗಳ ಲೇಖನವನ್ನು ಓದಿ 41 ಎನ್.ಎಸ್.ಎಸ್ ಘಟಕಗಳ ಸಮನ್ವಯಾಧಿಕಾರಿಗಳ ಗಮನ ಸೆಳೆದಿದ್ದು, ಆಯಾ ಜಿಲ್ಲೆಗಳಲ್ಲಿ ಸಮನ್ವಯಾಧಿಕಾರಿಗಳ ನೇತೃತ್ವದಲ್ಲಿ ಸಮುದಾಯ ಸೇವೆಗೆ ಮುಂದಾಗುವಂತೆ ಸಲಹೆ ಮಾಡಿದ್ದಾರೆ.

-ರಾಜ್ಯದ 22 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಪೀಡಿತವಾಗಿದ್ದು, ಅಲ್ಲಿ ಅಪಾರ ಆಸ್ತಿ ಪಾಸ್ತಿಗೆ ಹಾನಿಯಾಗಿದೆ. ರಸ್ತೆ ಹಾಗೂ ಸೇತುವೆಗಳು ಜಖಂಗೊಂಡಿವೆ. ವಿದ್ಯುತ್ ಮಾರ್ಗಗಳಿಗೂ ಹಾನಿಯಾಗಿದೆ. ಆದ್ದರಿಂದ ಪುನರ್ ನಿರ್ಮಾಣ ಕಾರ್ಯದಲ್ಲಿ ದೊಡ್ಡ ಮಟ್ಟದ ಮಾನವ ಸಂಪನ್ಮೂಲದ ಅಗತ್ಯವಿದೆ. ಎನ್.ಎಸ್.ಎಸ್ ಸ್ವಯಂಸೇವಕರು ಈ ಅಗತ್ಯವನ್ನು ತುಂಬಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

know_the_cm

know_the_cm

*************