ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ತೆರಿಗೆ ಸಂಗ್ರಹಣಾ ಇಲಾಖೆಗಳ ಸಭೆಯ ನಂತರ ನಡೆದ ಮಾನ್ಯ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

know_the_cm

ವಿಧಾನಸೌಧ,(ಬೆಂಗಳೂರು), ಸೆಪ್ಟೆಂಬರ್ 11, 2019

-ಇಂದು ನಾನು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದೇನೆ.

ವಾಣಿಜ್ಯ ತೆರಿಗೆ ಇಲಾಖೆ:

-ವಾಣಿಜ್ಯ ತೆರಿಗೆ ಇಲಾಖೆಯ ಈ ವರ್ಷದ ತೆರಿಗೆ ಸಂಗ್ರಹ ಗುರಿ 76,046 ಕೋಟಿ ರೂ. ಆಗಿದ್ದು, ಈ ವರೆಗೆ 33,618 ಕೋಟಿ ರೂ. ತೆರಿಗೆ ಸಂಗ್ರಹ ಆಗಿದೆ. ಇದು ವಾರ್ಷಿಕ ಗುರಿಯ ಶೇ. 44.2 ರಷ್ಟು ಇದೆ.

-ಕಳೆದ ವರ್ಷ ಇದೇ ಅವಧಿಯ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ, ಶೇ. 20.3 ರಷ್ಟು ಹೆಚ್ಚಳ ಆಗಿದೆ.ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿಯೂ ಶೇ. 14.3 ರಷ್ಟು ಬೆಳವಣಿಗೆ ಆಗಿದೆ.

-ಜಿಎಸ್ಟಿ ಜಾರಿಯಾದಾಗ 4.51 ಲಕ್ಷ ಮಂದಿ/ ಕಂಪೆನಿಗಳು ಜಿಎಸ್ಟಿಯಲ್ಲಿ ನೋಂದಾಯಿಸಿಕೊಂಡಿದ್ದರು. ಈಗ ನೋಂದಣಿ ಮಾಡಿಕೊಂಡವರ ಸಂಖ್ಯೆ 8,16,573 ದಾಟಿದ್ದು, ಜಿಎಸ್ಟಿಯಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ ಸುಮಾರು ಶೇ. 100 ರಷ್ಟು ಹೆಚ್ಚಳವಾಗಿದೆ.

-ಆರ್ಥಿಕ ಹಿಂಜರಿತದಿಂದ ಸ್ವಲ್ಪ ಹಿನ್ನಡೆಯಾಗಿದ್ದರೂ, ಇತರ ರಾಜ್ಯಗಳಿಗೆ ಹೋಲಿಸಿದರೆ ಉತ್ತಮ ಸ್ಥಿತಿಯಲ್ಲಿದ್ದೇವೆ.

-ತೆರಿಗೆ ಸಂಗ್ರಹವನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, ವ್ಯಾಪಾರದ ಸ್ಥಳಕ್ಕೆ ಭೇಟಿ ನೀಡಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ.

-ಜಿಎಸ್ಟಿ ಪಾವತಿಯಲ್ಲಿ ನಿರ್ಲಕ್ಷ್ಯ ತೋರಿದ 64 ಸಾವಿರಕ್ಕೂ ಹೆಚ್ಚು ಲೈಸನ್ಸ್ಗಳನ್ನು ರದ್ದುಪಡಿಸಲಾಗಿದೆ.

-ನಿಯಮಿತ ತಪಾಸಣೆ, ಫಾಲೋಅಪ್ ಗಳ ಜೊತೆಗೆ ಇ-ವೇ ಬಿಲ್ಲುಗಳ ತಪಾಸಣೆಯನ್ನೂ ಕಟ್ಟುನಿಟ್ಟಾಗಿ ನಡೆಸುವ ಮೂಲಕ, ತೆರಿಗೆ ಸಂಗ್ರಹಣೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

-ಈ ಸಾಲಿನಲ್ಲಿ 44 ಲಕ್ಷ ಇ-ವೇ ಬಿಲ್ಗಳನ್ನು ತಪಾಸಣೆ ಮಾಡಲಾಗಿದೆ.ಜಿಎಸ್ಟಿ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.

-ಜಾರಿ ಮತ್ತು ಜಾಗೃತಿ ವಿಭಾಗಗಳನ್ನು ಬಲ ಪಡಿಸಲು ಸೂಚಿಸಲಾಗಿದೆ. ತೆರಿಗೆ ಸೋರಿಕೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

-ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಟ್ಟಾರೆ ಬೆಳವಣಿಗೆ ಶೇ. 14.16 ರಷ್ಟಿದ್ದು, ಇತರ ರಾಜ್ಯಗಳಿಗಿಂತ ಉತ್ತಮ ಬೆಳವಣಿಗೆ ಆಗಿದೆ. ಆದರೆ ಇನ್ನೂ ಉತ್ತಮ ಸ್ಥಿತಿಗೆ ತರಬೇಕು ಎಂದು ಸೂಚನೆ ಕೊಟ್ಟಿದ್ದೇನೆ.

-ಬೆಳವಣಿಗೆ ದರ ಸುನಿಶ್ಚಿತ ಗೊಳಿಸಲು ಎಲ್ಲ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ.

-ಜಿಎಸ್ಟಿ ಸಂರಕ್ಷಿತ ತೆರಿಗೆ ಮತ್ತು ವಾಸ್ತವ ತೆರಿಗೆ ಸಂಗ್ರಹದ ನಡುವಿನ ಅಂತರ ಕಡಿಮೆಗೊಳಿಸಲು ಶ್ರಮಿಸಬೇಕು ಎಂದು ಸಹ ತಿಳಿಸಿದ್ದೇನೆ.

-ವಿಭಾಗೀಯ ಜಂಟಿ ಆಯುಕ್ತರು, ರಾಜಸ್ವ ಸಂಗ್ರಹ ಕೊರತೆ ಆಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಿದ್ದೇನೆ. ಮೇಲ್ಮನವಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆಯೂ ಸೂಚಿಸಿದ್ದೇನೆ.

ಅಬಕಾರಿ ಇಲಾಖೆ:

-ಅಬಕಾರಿ ಇಲಾಖೆಯಲ್ಲಿ 2019-2020ನೇ ಸಾಲಿಗೆ 20950 ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿದೆ.

-ಏಪ್ರಿಲ್ 1 ರಿಂದ ಆಗಸ್ಟ್ 30 ರ ವರೆಗೆ 9145.36 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಶೇ. 43.65 ರಷ್ಟು ಗುರಿ ಸಾಧನೆಯಾಗಿದೆ.

-ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು, ವರ್ಷಾಂತ್ಯಕ್ಕೆ ನಿಗದಿತ ಗುರಿ ಸಾಧಿಸುವ ವಿಶ್ವಾಸವಿದೆ.ತೆರಿಗೆ ಸಂಗ್ರಹದಲ್ಲಿ ಕಳೆದ ವರ್ಷಕ್ಕಿಂತ 952.70 ಕೋಟಿ ರೂ. ಹೆಚ್ಚುವರಿ ಮೊತ್ತ ಸಂಗ್ರಹವಾಗಿದ್ದು, ಶೇ. 11.63 ರಷ್ಟು ಹೆಚ್ಚಳವಾಗಿದೆ.

ಸಾರಿಗೆ ಇಲಾಖೆ:

-ಸಾರಿಗೆ ಇಲಾಖೆ ಹಾಗೂ ಸಾರಿಗೆ ನಿಗಮಗಳ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 7100 ಕೋಟಿ ರೂ. ಗಳಷ್ಟಿದ್ದು, ಆಗಸ್ಟ್ 30 ರ ವರೆಗೆ 2750.82 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು.

-ಅದರಲ್ಲಿ 2476 ಕೋಟಿ ರೂ. ತೆರಿಗೆ ಸಂಗ್ರವಾಗಿದ್ದು, ತೆರಿಗೆ ಸಂಗ್ರಹ ನಿಗದಿತ ಗುರಿಯ ಶೇ. 90 ರಷ್ಟಾಗಿದೆ.

-ವಾಹನ ಮಾರಾಟದಲ್ಲಿ ಸಾರಿಗೆ ಮತ್ತು ಸಾರಿಗೇತರ ವಾಹನಗಳ ನೋಂದಣಿಯಲ್ಲಿ ಶೇ. 10.34 ರಷ್ಟು ಕಡಿಮೆಯಾಗಿದೆ. ಇದರಿಂದಾಗಿ ತೆರಿಗೆ ಸಂಗ್ರಹದಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ ನಂತರ ಸುಧಾರಣೆಯಾಗುವ ನಿರೀಕ್ಷೆ ಇದೆ.

-ಸಂಚಾರ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ:

-ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 11,828 ಕೋಟಿ ರೂ. ಗಳಷ್ಟಿದ್ದು, ಆಗಸ್ಟ್ 30 ರ ವರೆಗೆ 4574.51 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು.

-ಅದರಲ್ಲಿ 4620.30 ಕೋಟಿ ರೂ. ತೆರಿಗೆ ಸಂಗ್ರವಾಗಿದ್ದು, ಶೇ. ಶೇ.. 101.1 ರಷ್ಟಾಗಿದೆ.ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹವಾದ ತೆರಿಗೆಗಿಂತ 530. 27 ಕೋಟಿ ರೂ. ತೆರಿಗೆ ಹೆಚ್ಚಳವಾಗಿದೆ.

-ಕಳೆದ ವರ್ಷಕ್ಕೆ ಹೋಲಿಸಿದರೆ ಆಸ್ತಿ ನೋಂದಣಿಯಲ್ಲಿ ಬೆಂಗಳೂರಿನಲ್ಲಿ ಶೇ. 3.86 ರಷ್ಟು ಹೆಚ್ಚಳವಾಗಿದೆ.

-ವಿವಿಧ ಸೇವೆಗಳನ್ನು ಆನ್ ಲೈನ್ನಲ್ಲಿ ಒದಗಿಸುತ್ತಿರುವುದು ತೆರಿಗೆ ಸಂಗ್ರಹಕ್ಕೆ ಪೂರಕವಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ:

-ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ 2019-20ನೇ ಸಾಲಿಗೆ 3550 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಇತ್ತು. ಅದರಲ್ಲಿ ಒಟ್ಟು 1314 ಕೋಟಿ ರೂ. ಅಂದರೆ ಶೇ. 37 ರಷ್ಟು ರಾಜಸ್ವ ಸಂಗ್ರಹ ಆಗಿದೆ.

-ಆರ್ಥಿಕ ವರ್ಷದ ಅಂತ್ಯದ ವೇಳೆಗೆ ನಿಗದಿತ ಗುರಿ ಸಾಧಿಸುವ ವಿಶ್ವಾಸ ಇದೆ.

-ರಾಜ್ಯದಲ್ಲಿ ಮರಳು ಮಾಫಿಯಾ ಮಟ್ಟಹಾಕಿ ಜನಸಾಮಾನ್ಯರಿಗೆ ಸುಲಭ ದರದಲ್ಲಿ ಮರಳು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

-ಇವತ್ತು ಅಧಿಕಾರಿಗಳಿಗೆ ತೆರಿಗೆ ಸಂಗ್ರಹದ ನಿಗದಿತ ಗುರಿ ಸಾಧನೆ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ನೀಡಿದ್ದೇನೆ.

-ಅವರ ಸಮಸ್ಯೆಗಳಿಗೂ ಸ್ಪಂದಿಸುವ ಭರವಸೆ ಕೊಟ್ಟಿದ್ದೇನೆ.

-ಮುಂದಿನ ದಿನಗಳಲ್ಲಿ ನಾವು ನಮ್ಮ ನಿಗದಿತ ಗುರಿ ಸಾಧಿಸುವ ವಿಶ್ವಾಸ ಹೊಂದಿದ್ದೇನೆ.

*************