ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಾಯಕೊಂಡ ತಾಲ್ಲೂಕು ರಚನೆಗೆ ಶೀಘ್ರ ಕ್ರಮ - ಮುಖ್ಯಮಂತ್ರಿ ಭರವಸೆ

know_the_cm

ಗೃಹ ಕಚೇರಿ ಕೃಷ್ಣಾ, (ಬೆಂಗಳೂರು), ಸೆಪ್ಟೆಂಬರ್ 12, 2019

-ದಾವಣಗೆರೆ ಜಿಲ್ಲೆ ಮಾಯಕೊಂಡ ತಾಲ್ಲೂಕು ರಚನೆಗೆ ಕಂದಾಯ ಇಲಾಖೆಯಿಂದ ವರದಿ ತರಿಸಿಕಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

-ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ತಮ್ಮನ್ನು ಭೇಟಿಯಾದ ನಿಯೋಗದೊಂದಿಗೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸುತ್ತಾ ಮಾಯಕೊಂಡ ತಾಲ್ಲೂಕು ರಚನೆ ಕುರಿತು ತಿಳಿಸಿದರು.

-ಹುಂಡೇಕಾರ್ ಸಮಿತಿ, ಗದ್ದಿಗೌಡರ ಸಮಿತಿ ಹಾಗೂ ವಾಸುದೇವರಾವ್ ಸಮಿತಿ ವರದಿಗಳಲ್ಲಿ ಮಾಯಕೊಂಡ ತಾಲ್ಲೂಕು ರಚನೆಗೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಕೊಂಡ ತಾಲ್ಲೂಕು ರಚನೆಗೆ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಕಂದಾಯ ಇಲಾಖೆಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

-ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮೊದಲಾದವರು ನಿಯೋಗದಲ್ಲಿದ್ದರು.

*************