ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲಿ ಸ್ಥಾಪನೆ - ಮುಖ್ಯಮಂತ್ರಿ

know_the_cm

(ಕಲಬುರಗಿ), ಸೆಪ್ಟೆಂಬರ್ 17, 2019

-ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

-ಅವರು ಕಲಬುರಗಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳ ಪರಿವೀಕ್ಷಣೆ ಕೈಗೊಂಡು ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

know_the_cm

know_the_cm

-ಪ್ರಸ್ತುತ ಇರುವ 371(ಜೆ) ಕಲಂ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು ಈ ಭಾಗದವರಿಗೆ ನೇಮಕಾತಿ, ಮುಂಬಡ್ತಿ ಮತ್ತು ಇನ್ನಿತರ ಸವಲತ್ತು ಹೆಚ್ಚಿನ ರೀತಿಯಲ್ಲಿ ದೊರಕುವಂತೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದ್ದು, ಅದಕ್ಕೆ ಪೂರಕವಾಗಿ ಹೈ.ಕ.ಕೋಶದ ಪ್ರಾದೇಶಿಕ ಕಚೇರಿಯನ್ನು ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.

-ಕಲ್ಯಾಣ ನಾಡಿನ ಶ್ರೀಮಂತ ಇತಿಹಾಸದ ಬಹಳಷ್ಟು ವಿಷಯಗಳು ರಾಜ್ಯದ ಮತ್ತು ದೇಶದ ಪಠ್ಯಪುಸ್ತಕದಲ್ಲಿ ಬಿಟ್ಟು ಹೋಗಿದೆ. ಬಿಟ್ಟು ಹೋದ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು. ಜೊತೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಧ್ಯಯನ ಪೀಠ ಸಹ ಸ್ಥಾಪಿಸಲಾಗುವುದು. ಇದರಿಂದ ಮುಂದಿನ ಪೀಳಿಗಿಗೆ ಕಳೆದು ಹೋದ ಇತಿಹಾಸ ಅರಿಯಲು ಪ್ರಯೋಜನವಾಗಲಿದೆ ಎಂದರು.

-1947ರ ಆಗಸ್ಟ್ 15 ರಂದು ಇಡೀ ದೇಶ ಸ್ವಾತಂತ್ಯದ ಸಂಭ್ರಮಾಚರಣೆಯಲ್ಲಿದ್ದರೆ, ನಿಜಾಮನ ಆಡಳಿತಕ್ಕೊಳಪಟ್ಟಿದ್ದ ಹೈ.ಕ.ಪ್ರದೇಶ ಮಾತ್ರ ಭಾರತದ ಒಕ್ಕೂಟದಲ್ಲಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿತು. ಇದರಿಂದ ಸ್ವಾತಂತ್ರ್ಯ ಎಂಬುದು ಇಲ್ಲಿನವರಿಗೆ ಮರೀಚಿಕೆಯಾಯಿತು. 1947-48ರಲ್ಲಿ ಹೈದ್ರಾಬಾದ ನಿಜಾಮ್ ಮೀರ್ ಉಸ್ಮಾನ್ ಅಲಿ ಖಾನ್ ಬಹಾದ್ದೂರನನ್ನು ತನ್ನ ಕೈಗೊಂಬೆಯಾಗಿರಿಸಿಕೊಂಡಿದ್ದ ರಜಾಕಾರರ ನಾಯಕ ಖಾಸಿಂ ರಜ್ಜಿ ಅವರ ಹಿಂಸೆ ಈ ಭಾಗದಲ್ಲಿ ವ್ಯಾಪಕವಾಯಿತು. ಇದನ್ನಿರತ ಅಂದಿನ ಗೃಹ ಮಂತ್ರಿ ಸರ್ದಾರ ವಲ್ಲಭಭಾಯಿ ಪಟೇಲರು “ಹೈದ್ರಾಬಾದ್ ಆ್ಯಕ್ಷನ್” ಕಾರ್ಯಾಚರಣೆಗೆ ಅಂಕಿತ ಹಾಕಿದರು. ಮೇಜರ್ ಜನರಲ್ ಜೆ.ಎನ್.ಚೌಧರಿ ನೇತೃತ್ವದಲ್ಲಿ 12 ದಿಕ್ಕಿನಿಂದ ಹೈದ್ರಾಬಾದ ಮೇಲೆ ದಾಳಿ ಮಾಡಲಾಯಿತು. ಸೇನಾ ಕಾರ್ಯಚರಣೆಗೆ ಕಂಗೆಟ್ಟಿದ ನಿಜಾಮರಿಗೆ ಶರಣಾಗತಿ ಬಿಟ್ಟು ಬೇರೆ ದಾರಿ ಇರದೆ ಸೆಪ್ಟೆಂಬರ್ 17, 1948ರ ರಂದು ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಸಮಕ್ಷಮ ಹೈ.ಕ.ಪ್ರಾಂತ್ಯ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಳಿಸಲು ಒಪ್ಪಿ ಸಹಿ ಹಾಕಿದರು, ಅಲ್ಲಿಗೆ ಹೈ.ಕ.ಪ್ರಾಂತ್ಯ ವಿಮೋಚನೆಯಾಯಿತು.

-ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಾದ ಸರದಾರ ಶರಣಗೌಡ ಇನಾಮದಾರ, ರಾಜಾ ವೆಂಕಟಪ್ಪ ನಾಯಕ, ದತ್ತಾತ್ರೇಯ ಅವರಾದಿ, ಅಳವಂಡಿ ಶಿವಮೂರ್ತಿಸ್ವಾಮಿ, ರಾಮಚಂದ್ರ ವೀರಪ್ಪ, ಎ.ವಿ.ಪಾಟೀಲ, ಆರ್.ವಿ.ಬಿಡ್ಡಪ್ಪ, ಹಕ್ಕಿಕತ್ರಾ್ವ್ ಚಿಟಗುಪ್ಪಕರ್, ಚಂದ್ರಶೇಖರ ಪಾಟೀಲ ಸೇರಿದಂತೆ ನೂರಾರು ವಿಮೋಚನಾ ಹೋರಾಟಗಾರರ ತ್ಯಾಗ, ಬಲಿದಾನವನ್ನು ನಾವು ಸ್ಮರಿಸಬೇಕಾಗುತ್ತದೆ ಎಂದರು.

-ಶರಣ ಸಂಸ್ಕøತಿಯ 12ನೇ ಶತಮಾನದಲ್ಲಿ ಭಕ್ತಿ, ಸಾಹಿತ್ಯ, ಸಾಮಾಜಿಕ ನ್ಯಾಯ, ವಚನ ಚಳುವಳಿ, ಮಹಿಳಾ ಸಮಾನತೆ ಹೀಗೆ ಅದ್ಭುತ ಚಿಂತನೆಗೆ ವೈಚಾರಿಕ ಕ್ರಾಂತಿಗೆ ಮುನ್ನುಡಿ ಬರೆದ ನೆಲ ಇದಾಗಿದೆ. ಹೀಗಾಗಿ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಇಂದು ಕಲ್ಯಾಣ ಕರ್ನಾಟಕ ಪ್ರದೇಶವೆಂದು ಮರುನಾಮಕರಣಗೊಳಿಸಲಾಗುತ್ತಿದೆ. ಪ್ರಾಂತ್ಯದ ಹೊಸ ಹೆಸರಿನಲ್ಲಿರುವ “ಕಲ್ಯಾಣ” ಎಂಬ ಪದವು “ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು” ಎಂಬ ಧ್ಯೇಯವನ್ನು ಎತ್ತಿ ಹಿಡಿಯುತ್ತದೆ ಎಂದರು.

-ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಬಾಬುರಾವ ಶಂಕರರಾವ್ ದೇಶಮಾನೆ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ, ಭಗವತ್ ಕೊಲ್ಲಿ, ಸಿದ್ಧರಾವ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

know_the_cm

-ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ, ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ತಿಪ್ಪಣ್ಣ ಕಮಕನೂರ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಇದ್ದರು.

ಸರ್ದಾರ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಮಾಲಾರ್ಪಣೆ:

know_the_cm

-ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಸ್.ವಿ.ಪಿ.ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಮುಖ್ಯಮಂತ್ರಿಗಳಿಗೆ ಸಂಸದರು, ಶಾಸಕರು ಸಾಥ್ ನೀಡಿದರು.

ಮುಖ್ಯಮಂತ್ರಿಗಳಿಂದ "ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ" ಕಲಬುರಗಿ ಪೀಠಕ್ಕೆ ಚಾಲನೆ:

know_the_cm

-ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಕಲಬುರಗಿ ಪೀಠ ಸ್ಥಾಪನೆ ಮಾಡುವ ಮೂಲಕ ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಂತೃಪ್ತಿ ನನಗಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಮ್ಮೆಯಿಂದ ನುಡಿದಿದ್ದಾರೆ.

-ಕಲಬುರಗಿಯ ಕೆ.ಎಚ್.ಬಿ ಕಾಲೋನಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಎಸ್ಎಂಟಿ ಕಲಬುರಗಿ ಪೀಠ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

-ಕಲ್ಯಾಣ ಕರ್ನಾಟಕ ದಿನಾಚರಣೆಯಂದು ಕೆಎಸ್ಎಯಟಿ ಕಲಬುರಗಿ ಪೀಠಕ್ಕೆ ಚಾಲನೆ ನೀಡುತ್ತಿರುವುದಕ್ಕೆ ನನಗೆ ಸಂತಸವಾಗುತ್ತಿದೆ ಎಂದು ಅವರು ಹೇಳಿದರು.

-ಸರ್ಕಾರಿ ನೌಕರರ ವರ್ಗಾವಣೆ, ನಿವೃತ್ತಿ ಸವಲತ್ತು ಹಾಗೂ ಬಡ್ತಿ ಮುಂತಾದ ಸೇವಾ ವಿಷಯಗಳಿಗೆ ಪ್ರತ್ಯೇಕ ನ್ಯಾಯ ಮಂಡಳಿಯನ್ನು 1986ರಲ್ಲಿಯೇ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿತ್ತು. ಇದೀಗ ಕಲಬುರಗಿ ಪೀಠ ಸ್ಥಾಪನೆಯಿಂದ ಈ ಭಾಗದ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

-ತ್ವರಿತ ಮತ್ತು ಕಡಿಮೆ ವೆಚ್ಚದ ನ್ಯಾಯದಾನ ಮಾಡುವ ಸದುದ್ದೇಶವನ್ನು ಈ ವ್ಯವಸ್ಥೆ ಹೊಂದಿದೆ. ಬೆಂಗಳೂರು ಪ್ರಧಾನ ಕೆಎಸ್ಎಯಟಿ ಪೀಠದಲ್ಲಿರುವ 11,978 ಪ್ರಕರಣಗಳ ಪೈಕಿ, 1,002 ಅರ್ಜಿಗಳನ್ನೊಳಗೊಂಡ 617 ಪ್ರಕರಣಗಳು ಕಲಬುರಗಿ ಪೀಠಕ್ಕೆ ವರ್ಗಾವಣೆಯಾಗಲಿವೆ ಎಂದು ಅವರು ತಿಳಿಸಿದರು.

-ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾನೂನು ಮತ್ತು ಸಂಸದೀಯ, ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, ಬೆಂಗಳೂರು ಕೆಎಸ್ಎಾಟಿ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ 2.73,535 ಪ್ರರಣಗಳ ಪೈಕಿ 2.61,335 ಪ್ರರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.

-ಕಲಬುರಗಿ ಪೀಠ ವ್ಯಾಪ್ತಿಯಲ್ಲಿ ಕಲಬುರಗಿ, ಬೀದರ, ಯಾದಗಿರ, ರಾಯಚೂರ ಹಾಗೂ ವಿಜಯಪುರ ಜಿಲ್ಲೆಗಳು ಬರಲಿದ್ದು, ಪೀಠಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

-ಈ ಸಂದರ್ಭದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ಕಲಬುರಗಿ ಪೀಠದ ವ್ಯಾಪ್ತಿಗೆ ತರಬೇಕೆಂದು ಕೆಲ ವಕೀಲರು ಕಾರ್ಯಕ್ರಮದಲ್ಲಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲಿಸಲಾಗುವುದು ಎಂದು ಅವರು ಭರವಸೆ ನೀಡಿದರು.

-ಬೆಂಗಳೂರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಲೋಕಾಯುಕ್ತ ಪ್ರಕರಣದಲ್ಲಿ ಸರ್ಕಾರಿ ನೌಕರರನ್ನು ಅಮಾನತು ಅಥವಾ ವಜಾ ಮಾಡುವಂತಹ ಕ್ರಮ ಸರಿಯಲ್ಲ. ಏಕೆಂದರೆ ಪ್ರಕರಣದಲ್ಲಿ ಸಿಲುಕಿದ ಎಲ್ಲಾ ಸರ್ಕಾರಿ ನೌಕರರು ತಪ್ಪಿತಸ್ಥರಲ್ಲ. ಸರ್ಕಾರಿ ನೌಕರರ ಅಮಾನತು ಅಥವಾ ವಜಾದಿಂದ ಅವರನ್ನು ನಂಬಿರುವ ಕುಟುಂಬ ಸದಸ್ಯರ ಜೀವನಕ್ಕೆ ತೊಂದರೆಯಾಗÀುತ್ತದೆ ಎಂದು ಹೇಳಿದರು.

-ಕಲಬುರಗಿ ಸಂಸದ ಡಾ.ಉಮೇಶ ಜಾಧವ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೆದಾರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಮಾಜಿ ಶಾಸಕರಾದ ಮಾಲಿಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ್, ಕಲಬುರಗಿ ಪೊಲೀಸ್ ಆಯುಕ್ತ ಎನ್. ನಾಗರಾಜ್, ಜಿಲ್ಲಾಧಿಕಾರಿ ಬಿ.ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿ. ಕಿಶೋರ ಬಾಬು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಕಲಬುರಗಿ ಸಹಾಯಕ ಆಯುಕ್ತ ರಾಹುಲ್ ತುಕಾರಾಮ ಪಾಂಡ್ವೆ, ಐಎಎಸ್. ಪ್ರೊಬೇಷನರಿ ಅಧಿಕಾರಿ ಡಾ.ಗೋಪಾಲಕೃಷ್ಣ, ಕಲಬುರಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶರಣಬಸವ ಸಿ ಪಸ್ತಪುರ್ ಸೇರಿದಂತೆ, ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು. ಜಿಲ್ಲಾ ನ್ಯಾಯಾಧೀಶರು ಹಾಗೂ ಬೆಂಗಳೂರು ಕೆ.ಎಸ್.ಎ.ಟಿ ವಿಲೇಖನಾಧಿಕಾರಿ ಅಮರನಾರಾಯಣ ಕೆ ಅವರು ಕೆಎಸ್ಎೂಟಿ ಪೀಠದ ವರದಿ ಮಂಡಿಸಿದರು. ಕಲಬುರಗಿ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಬಿ. ಕಿನ್ನಿ ಸ್ವಾಗತಿಸಿದರು. ಹೈಕೋರ್ಟ್ ನ ಜಂಟಿ ಕಾರ್ಯದರ್ಶಿ ಸಂತೋಷ್ ಅವರು ವಂದಿಸಿದರು.

know_the_cm

ಸಂಚಾರಿ ತಾರಾಲಯಗಳು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅರ್ಪಣೆ:

know_the_cm

-ಕಲ್ಯಾಣ ಕರ್ನಾಟಕ ಪ್ರದೇಶದ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕಲ್ಯಾಣ-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯದೊಂದಿಗೆ ಈ ಭಾಗದ ಪ್ರತಿ ಜಿಲ್ಲೆಯಲ್ಲಿ ಒಂದು ಸಂಚಾರಿ ತಾರಾಲಯ “ಶಾಲೆಯ ಅಂಗಳದಲ್ಲೇ ತಾರಾಲಯ” ನಿಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು.

-ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ವಿವಿಧ ಸೌಲಭ್ಯ ವಿತರಣಾ ಸಮಾವೇಶ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಂಚರಿಸಿ ಇಲ್ಲಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಹಲವು ಕೌತುಕಗಳನ್ನು ತಿಳಿಸಲು ಅಣಿಯಾಗಿರುವ 6 ಸಂಚಾರಿ ತಾರಾಲಯ ವಾಹನಗಳಿಗೆ ಹಸಿರು ನಿಶಾನೆ ತೋರಿದರು.

-ಗ್ರಾಮೀಣ ಮತ್ತು ದೂರ ಪ್ರದೇಶದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟ ಸ್ಥಳದಲ್ಲಿ ತಾರಾಲಯಗಳಿಗೆ ಬಂದು ವೀಕ್ಷಿಸುವುದು ಕಷ್ಟಕರವಾಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಚಲಿತ ಖಗೋಳ ವಿಜ್ಞಾನದ ಬಗ್ಗೆ ನೋಡಿ ತಿಳಿದುಕೊಳ್ಳುವ ಅವಕಾಶ ಈ ಸಂಚಾರಿ ತಾರಾಲಯಗಳು ಮಾಡಿಕೊಡಲಿವೆ. ಸದರಿ ತಾರಾಲಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯಕ್ರಮಕ್ಕೆ ಅನುಗುಣವಾಗಿ "ನೋಡಿ ತಿಳಿ" ಪರಿಕಲ್ಪನೆಯಡಿ ರೂಪಿಸಲಾಗಿದೆ.

-ತಾರಾಲಯ ಪ್ರದರ್ಶನಗಳನ್ನು ಅತ್ಯಾಧುನಿಕ ಪ್ರೋಜೆಕ್ಟರ್ ಹಾಗೂ ಗಾಳಿ ತುಂಬಬಹುದಾದ ಗೊಮ್ಮಟದ ಸಹಾಯದಿಂದ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದ ಮಾದರಿಯಲ್ಲಿ ಪ್ರದರ್ಶಿಸಲಾಗುತ್ತದೆ. ಪ್ರದರ್ಶನ ಅವಧಿ 25 ರಿಂದ 30 ನಿಮಿಷಗಳವಿದ್ದು, ಏಕಕಾಲದಲ್ಲಿ 30 ರಿಂದ 40 ವಿದ್ಯಾರ್ಥಿಗಳು ವೀಕ್ಷಣೆ ಮಾಡಬಹುದಾಗಿದೆ.

know_the_cm

ಪ್ರವಾಸಿ ಟ್ಯಾಕ್ಸಿ ವಿತರಣೆ:

-ಪ್ರವಾಸೋದ್ಯಮ ಇಲಾಖೆಯ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆ ಹಾಗು ಹಿಂದುಳಿದ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ 25 ಫಲಾನುಭವಿಗಳಿಗೆ ಇಂದು 3 ಲಕ್ಷ ರೂಪಾಯಿ ಸಹಾಯಧನದೊಂದಿಗೆ ಮುಖ್ಯಮಂತ್ರಿಗಳು ಪ್ರವಾಸಿ ಟ್ಯಾಕ್ಸಿ ಕಾರ್ ವಿತರಣೆ ಮಾಡಿದರು.

ರೈತರಿಗೆ 8 ಕೃಷಿ ಟ್ರ್ಯಾಕ್ಟರ್ ವಿತರಣೆ:

-ಕೃಷಿ ಇಲಾಖೆಯ ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತಾಪಿ ಸಮುದಾಯವು ಕೃಷಿ ಚಟುವಟಿಕೆÀ ಕೈಗೊಳ್ಳಲು ಅನುಕೂಲವಾಗುವಂತೆ ಪ್ರತಿ ಫಲಾನುಭವಿಗೆ 75 ಸಾವಿರ ರೂ. ಸಹಾಯಧನದ 8 ಕೃಷಿ ಟ್ರ್ಯಾಕ್ಟರ್ ಸಹ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಫಲಾನುಭವಿಗಳಿಗೆ ಹಂಚಿಕೆ ಮಾಡಿದರು.

-ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ, ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ತಿಪ್ಪಣ್ಣ ಕಮಕನೂರ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಇದ್ದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ - ಮುಖ್ಯಮಂತ್ರಿ:

know_the_cm

-ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಈ ಭಾಗದ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

-ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

-ಈ ಭಾಗದ ಜನರ ಭಾವನೆಗೆ ಬೆಲೆಕೊಟ್ಟು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಮಾಡಲು ಸಂತಸದಿಂದಬಂದಿದ್ದೇನೆ. ಪ್ರದೇಶ ಮರುನಾಮಕರಣ ಮಾಡಿದ್ದಕ್ಕೆ ಮಾತ್ರ ಅಭಿವೃದ್ಧಿ ಆಗುವುದಿಲ್ಲ. ಬದಲಾಗಿ ಇಲ್ಲಿನ ಜನರ ಅಶೋತ್ತರಗಳನ್ನು ಈಡೇರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಆ ಮುಖೇನ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.

-ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಹಣಕಾಸಿನ ತೊಂದರೆ ಆಗಬಹುದು, ಆದರೆ ಮುಂದಿನ ವರ್ಷ ಆಯವ್ಯಯದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

-ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಕೇವಲ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಮುಂದಿನ ದಿನದಲ್ಲಿ ಈ ಭಾಗದವರನ್ನು ಸಚಿವ ಸಂಪುಟಕ್ಕೆ ಪರಿಗಣಿಸಲಾಗುವುದು ಎಂದು ಸ್ಪಷ್ಠನೆ ನೀಡಿದರು.

-ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

know_the_cm

-ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ, ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಸೇರಿದಂತೆ ಇನ್ನಿತರರು ಇದ್ದರು.

ಒಂದು ತಿಂಗಳಿನಲ್ಲಿ ವಿಮಾನಯಾನ ಸೇವೆ ಪ್ರಾರಂಭ, ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಿಗೆ ಆಹ್ವಾನ - ಮುಖ್ಯಮಂತ್ರಿ

know_the_cm

-ರಾಜ್ಯ ಸರ್ಕಾರವೇ 175.57 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಲಬುರಗಿ ವಿಮಾನ ನಿಲ್ದಾಣವು ವಾಣಿಜ್ಯ ಹಾರಾಟಕ್ಕೆ ಸಜ್ಜಾಗಿದ್ದು, ಒಂದು ತಿಂಗಳೊಳಗೆ ನಾಗರಿಕ ವಿಮಾನ ಸೇವೆ ಆರಂಭಿಸಲಾಗುವುದು. ಇದರ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

-ಅವರು ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿಮಾನದಲ್ಲಿ ಹಾರಾಡಬೇಕೆಂಬ ಇಲ್ಲಿನ ಜನರ ದಶಕದ ಕನಸು ಈಡೇರಲಿದೆ. ವಿಮಾನಯಾನ ಸೇವೆ ಆರಂಭದಿಂದ ಕೈಗಾರಿಕೋದ್ಯಮಿಗಳು ಇಲ್ಲಿ ಹೂಡಿಕೆ ಮಾಡಲಿದ್ದು, ದುಡಿಯುವ ಕೈಗಳಿಗೆ ಕೆಲಸ ಸಿಗಲಿದೆ. ಆ ಮೂಲಕ ಇಲ್ಲಿ ನಿರುದ್ಯೋಗ ನಿವಾರಣೆಯಾಗಿ ಜನರ ಕಲ್ಯಾಣವಾಗಲಿದೆ ಎಂದರು.

-ಮುಂದಿನ ಅಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ಈ ಭಾಗದ ಜಿಲ್ಲೆಗಳನ್ನು ರಾಜ್ಯದ ಮಾದರಿ ಜಿಲ್ಲೆಯನ್ನಾಗಿ ಮಾಡಲಾಗುವುದು. ಇದಲ್ಲದೇ ಹೈ.ಕ. ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲಿ ಸ್ಥಾಪಿಸುವುದಲ್ಲದೇ ಈ ಭಾಗದ ಸರ್ವಾಂಗೀಣ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸಹ ಸ್ಥಾಪಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಿಂದುಳಿದ ಹಣೆಪಟ್ಟಿಯನ್ನು ಹೋಗಲಾಡಿಸಲು ಸಂಪುಟದ ಸಹೋದ್ಯೋಗಿಗಳಿಗೆ ಆದೇಶ ನೀಡಿದ್ದೇನೆ ಎಂದರು.

-ಭಕ್ತಿ, ಸಾಹಿತ್ಯ, ಹಾಗೂ ಸಾಮಾಜಿಕ ಕಲ್ಯಾಣವನ್ನು ಜತೆಯಾಗಿ ಬೆಸೆದ ಜಗತ್ತಿನ ಅತ್ಯಪೂರ್ವ ಚಳುವಳಿಯೊಂದು ರೂಪಗೊಂಡು 12ನೇ ಶತಮಾನದಲ್ಲಿ ಯಶಸ್ವಿಯಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ನೆಲ ಇದು. ಹೀಗಾಗಿ ಇಲ್ಲಿನ ಜನರ ಭಾವನೆಯಂತೆ ಹೈದ್ರಾಬಾದ ಕರ್ನಾಟಕವನ್ನು “ಕಲ್ಯಾಣ ಕರ್ನಾಟಕ” ಎಂದು ಮರುನಾಮಕರಣ ಮಾಡಲಾಗಿದೆ. ಈ ಭಾಗದ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯ ಮತ್ತು ಪ್ರಾದೇಶಿಕ ಅಸಮಾತೋಲನ ನಿವಾರಣೆಯೆ ನಮ್ಮ ಮುಂದಿನ ಗುರಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ನುಡಿದರು.

-ನಾಡಿನ ಆರೂವರೆ ಕೋಟಿ ಜನರ ಆಶೀರ್ವಾದಿಂದ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದ 6000 ರೂ.ಗಳ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 4,000 ರೂ. ನೀಡಲು ಘೋಷಣೆ ಮಾಡಿದ್ದೇನೆ ಎಂದರು.

-ಕಲ್ಯಾಣ ಕರ್ನಾಟಕ ಭಾಗ ಭಾರತದ ಅತ್ಯಂತ ಒಣ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಲ್ಪಟ್ಟಿದೆ. ಸತತ ಬರಗಾಲಗಳ ಕಾರಣ ಇಲ್ಲಿ ಅಭಿವೃದ್ಧಿ ಮರೀಚಿಕೆಯಾಗಿತ್ತು. ಡಾ. ಡಿ. ಎಂ. ನಂಜುಂಡಪ್ಪ ವರದಿಯ ಪ್ರಕಾರ ರಾಜ್ಯದ 39 ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ 21 ತಾಲೂಕುಗಳು ಈ ಭಾಗಕ್ಕೆ ಸೇರಿವೆ. 2006ರಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ನಡೆದ ಮೊದಲ ವಿಧಾನ ಮಂಡಲದ ಅಧಿವೇಶನದಲ್ಲಿ ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯ ಶಿಫಾರಸಿನನ್ವಯ ವಿಶೇಷ ಅಭಿವೃದ್ಧಿ ಯೋಜನೆ ಜಾರಿ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ. ಈ ವಿಶೇಷ ಅಭಿವೃದ್ಧಿ ಯೋಜನೆ ಹಿಂದುಳಿದ ತಾಲ್ಲೂಕುಗಳಲ್ಲಿ ಗಣನೀಯ ಬದಲಾವಣೆಯನ್ನು ತಂದಿದೆ. 2007-08 ರಿಂದ ಈ ವರೆಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಟ್ಟು 7,973.78 ಕೋಟಿ ರೂ. ಬಿಡುಗಡೆಯಾಗಿದ್ದು, 7,483.72 ಕೋಟಿ ರೂ. ವೆಚ್ಚವಾಗಿದೆ ಎಂದರು.

-ಸಂವಿಧಾನದ 371(ಜೆ) ಪರಿಚ್ಛೇದ ಜಾರಿಯಿಂದ ಉದ್ಯೋಗ ಮೀಸಲಾತಿಯಡಿ ಪ್ರಾದೇಶಿಕ ಸ್ಥಳೀಯ ವೃಂದ ಮತ್ತು ರಾಜ್ಯ ಮಟ್ಟದ ಸ್ಥಳೀಯ ವೃಂದದಲ್ಲಿ ಒಟ್ಟು 32,144 ಖಾಲಿ ಹುದ್ದೆಗಳನ್ನು ಗುರುತಿಸಲಾಗಿದೆ. ಇವುಗಳ ಪೈಕಿ ಜುಲೈ-2019ರ ಅಂತ್ಯಕ್ಕೆ 13,659 ಹುದ್ದೆಗಳನ್ನು ಸ್ಥಳೀಯ ಅಭ್ಯರ್ಥಿಗಳಿಂದಲೆ ತುಂಬಲಾಗಿದೆ. ಇನ್ನೂ 10,748 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ವಿವಿಧ ಹಂತದಲ್ಲಿದ್ದು, ಅವುಗಳನ್ನು ಸಹ ಶೀಘ್ರದಲ್ಲಿಯೆ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು. ಇದಲ್ಲದೆ ಪ್ರತಿ ವರ್ಷ 700ಕ್ಕೂ ಹೆಚ್ಚು ವೈದ್ಯಕೀಯ ಮತ್ತು ಸಾವಿರಾರು ಸಂಖ್ಯೆಯಲ್ಲಿ ಇಂಜಿನೀಯರಿಂಗ್ ಸೇರಿದಂತೆ ವೃತ್ತಿಪರ ಉನ್ನತ ಕೋರ್ಸುಗಳಲ್ಲಿ ಅಧ್ಯಯನ ಮಾಡಲು ಈ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿರುವುದು ಅವರ ಉಜ್ವಲ ಭವಿಷ್ಯಕ್ಕೆ ಬುನಾದಿಯಾಗಿದೆ ಎಂದರು.

-ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಕಳೆದ 2013-14ನೇ ಸಾಲಿನಿಂದ 2019-20ನೇ ಸಾಲಿನ ವರೆಗೆ ಒಟ್ಟು 6,753.50 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇದೂವರೆಗೆ 4005 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, 3,566.74 ಕೋಟಿ ರೂ. ಅನುದಾನ ವೆಚ್ಚವಾಗಿದೆ ಎಂದು ತಿಳಿಸಿದರು.

38.17 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ:

-ಇದೇ ಸಂದರ್ಭದಲ್ಲಿ 38.17 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದಲ್ಲದೆ ಬೆಣ್ಣೆತೋರಾ ನೀರಾವರಿ ಪ್ರದೇಶದಲ್ಲಿ ಭೂಮಿ ಕಳೆದಕೊಂಡ ರೈತರಿಗೆ ಹಕ್ಕು ಪತ್ರ ಮತ್ತು ಅಂತರ್ಜಾತಿ ವಿವಾಹವಾದ ಮೂರು ದಂಪತಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.

-ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ, ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ತಿಪ್ಪಣ್ಣ ಕಮಕನೂರ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಇದ್ದರು.

ಮುಖ್ಯಮಂತ್ರಿಗಳಿಂದ ಸಸಿ ನೆಡುವ ಮೂಲಕ “ವೃಕ್ಷೋತ್ಸವ” ಕಾರ್ಯಕ್ರಮಕ್ಕೆ ಚಾಲನೆ

-ಕಲಬುರಗಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜರುಗಿದ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದ ನಂತರ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಸಿ ನೆಡುವ ಮೂಲಕ ಅರಣ್ಯ ಇಲಾಖೆಯ “ವೃಕ್ಷೋತ್ಸವ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

-ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ, ವಿಧಾನಸಭೆ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವ್ಹಿ. ಗೀತಾಂಜಲಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ಚವ್ಹಾಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ ಪಾಟೀಲ ಹಾಗೂ ವಲಯ ಅರಣ್ಯಾಧಿಕಾರಿ ಜಗನ್ನಾಥ ಕೋರಳ್ಳಿ ಉಪಸ್ಥಿತರಿದ್ದರು.

*************