ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

know_the_cm

(ಶಿವಮೊಗ್ಗ), ಸೆಪ್ಟೆಂಬರ್ 30, 2019

-ಶಿಕಾರಿಪುರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

-ಹೊಸೂರು ಉಡುಗಣಿ ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ 607 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

-ಹೊಸಳ್ಳಿ ಏತನೀರಾವರಿ ಕಲ್ಲೂರು ನೀರಾವರಿ ಯೋಜನೆ, ಸೊರಬ ತಾಲೂಕಿನ ಮೂರು ಏತ ನೀರಾವರಿ ಯೋಜನೆಗಳು ಸದ್ಯದಲ್ಲೇ ಆರಂಭವಾಗಲಿದೆ ಎಂದರು.

-ಪ್ರವಾಹ ಪರಿಹಾರ ಕಾಮಗಾರಿಗಳನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ಟೋಬರ್ ನಾಲ್ಕರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಅವರು ತಿಳಿಸಿದರು.

-ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಹೇಳಿದರು.

-ಶಿಕಾರಿಪುರದಲ್ಲಿ ಶಾಹಿ ಗಾರ್ಮೆಂಟ್ ಘಟಕ ಆರಂಭವಾಗಲಿದ್ದು ಇದರಿಂದ ಈ ಭಾಗದ 2000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಹೇಳಿದ ಮುಖ್ಯಮಂತ್ರಿ ಅವರು, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ಹತ್ತು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸೂಚಿಸಿದ್ದು, 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

-ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

-ಇದೇ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ, ಶಿವಮೊಗ್ಗ -ಶಿಕಾರಿಪುರ- ರಾಣೆಬೆನ್ನೂರು ರೈಲ್ವೆ ಮಾರ್ಗ ಯೋಜನೆಗೆ ರಾಜ್ಯ ಸರ್ಕಾರದ ಪಾಲು 750 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು. ಕೋಟೆ ಗಂಗೂರು ಸ್ಯಾಟಲೈಟ್ ರೈಲ್ವೆ ನಿಲ್ದಾಣ ಸ್ಥಾಪನೆಗೆ 60 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದರು.

know_the_cm

*************