ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು - ಮುಖ್ಯಮಂತ್ರಿ

know_the_cm

(ವಿಧಾನಸೌಧ, ಬೆಂಗಳೂರು), ನವೆಂಬರ್ 05, 2019

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ತಿಳಿಸಿದರು.

-ಇಂದು ನಡೆದ ಸಭೆಯಲ್ಲಿ, ರಾಜ್ಯದ ರೈಲ್ವೆ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಗೆ ಸಂಬಂಧಿಸಿದಂತೆ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರು ಮಾಡಿದ ಮನವಿಗೆ, ಮುಖ್ಯಮಂತ್ರಿಗಳು ಕರ್ಮಕೈಗೊಳ್ಳುವ ಭರವಸೆ ನೀಡಿದರು.

-ಭೂಮಿಯ ಬೆಲೆ ದುಬಾರಿಯಾಗಿರುವ ಹಿನ್ನಲೆಯಲ್ಲಿ ವೈಟ್ ಫೀಲ್ಡ್ ನಿಂದ ಕೋಲಾರಕ್ಕೆ ರೈಲ್ವೆ ಮಾರ್ಗವನ್ನು ನಿರ್ಮಿಸಲು, ಭೂ ಸ್ವಾಧೀನ ಪ್ರಕ್ರಿಯೆ ತೊಡಕು ಉಂಟಾಗಿದೆ. ಈ ಬಗ್ಗೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ರೈಲ್ವೆ ಇಲಾಖೆಗೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೆ ಮಾರ್ಗಕ್ಕೆ ಆದಷ್ಟು ಶೀಘ್ರದಲ್ಲಿ ಭೂ ಸ್ವಾಧೀನ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. ಇದಲ್ಲದೆ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ರೈಲ್ವೆ ಯೋಜನೆಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರವನ್ನು ರಾಜ್ಯಸರ್ಕಾರ ನೀಡಲಿದೆ ಎಂದು ಅವರು ತಿಳಿಸಿದರು.

-ಹುಬ್ಬಳ್ಳಿ- ಹೊಸಪೇಟೆ, ಹೊಸಪೇಟೆ-ಬಳ್ಳಾರಿ ಹಾಗೂ ಧಾರವಾಡ ಇಲ್ಲಿನ ಕಾಮಗಾರಿಗಳಿಗೆ ವೆಚ್ಚ ಹಂಚಿಕೆ, ಹೊಸ 13 ಯೋಜನೆಗಳಿಗೆ 12780.97 ಎಕರೆ ಅರಣ್ಯೇತರ ಭೂಮಿಯ, ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುವುದು, ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.

-ಸಭೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ಬಿ.ವೈ.ರಾಘವೇಂದ್ರ, ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಜರಿದ್ದರು.

*************