ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವಿಪತ್ತು ನಿರ್ವಹಣಾ ನೀತಿ ಶೀಘ್ರ ಅಂತಿಮಗೊಳಿಸಲು ಮುಖ್ಯಮಂತ್ರಿ ಸೂಚನೆ

know_the_cm

(ವಿಧಾನಸೌಧ, ಬೆಂಗಳೂರು), ನವೆಂಬರ್ 20, 2019

-ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.

-ರಾಷ್ಟ್ರೀಯ ವಿಪತ್ತು ನಿರ್ವಹಣಾ ನೀತಿ ಮಾದರಿಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ನೀತಿ ಕರಡು ಸಿದ್ಧವಿದ್ದು 8 ವಾರದೊಳಗೆ ಅಂತಿಮ ಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

-ಅಂತೆಯೇ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯನ್ನು 8 ವಾರದೊಳಗೆ ಅಂತಿಮ ಗೊಳಿಸುವಂತೆ ತಿಳಿಸಿದರು.

-ಪ್ರತಿ ಇಲಾಖೆಯಲ್ಲಿ ವಿಪತ್ತು ನಿರ್ವಹಣಾ ಯೋಜನೆಯನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

-ವಿಪತ್ತು ನಿರ್ವಹಣೆ ಗೆ ಎಸ್ ಡಿ ಆರ್ ಎಫ್ ಗೆ 14 ನೇ ಹಣಕಾಸು ಆಯೋಗ ದಡಿ 1527 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ. ಇದರಲ್ಲಿ ಕೇಂದ್ರದ ಪಾಲು ಶೇ. 75 ರಷ್ಟು ಹಾಗೂ ರಾಜ್ಯದ ಪಾಲು ಶೇಕಡಾ 25 ರಷ್ಟು ಇದೆ. ಆದರೆ ರಾಜ್ಯ ಸರ್ಕಾರ ತುರ್ತು ಸಂದರ್ಭಗಳಲ್ಲಿ ಇನ್ನೂ ಹೆಚ್ಚಿನ ಮೊತ್ತ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದರು.

-ರಾಜ್ಯದ ಎಲ್ಲ ವಿಭಾಗಗಳಲ್ಲಿ ತಲಾ 50 ಜನರ ಎಸ್ ಡಿ ಆರ್ ಎಫ್ ರಕ್ಷಣಾ ತಂಡಗಳ ನಿಯೋಜನೆಗೆ ಕ್ರಮ ವಹಿಸಲಾಗಿದೆ.

-ಅಂತೆಯೇ ಎಸ್ ಡಿ ಆರ್ ಎಫ್ ಅಡಿ ರಕ್ಷಣಾ ಉಪಕರಣಗಳ ಖರೀದಿಗೆ 20 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ವಿವರಿಸಿದರು.

-ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ಸಂತ್ರಸ್ತರಿಗೆ ಪರಿಹಾರ ವಿತರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅರ್ಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ನಿಬಂಧನೆಗಳನ್ನು ಸರಳೀಕರಣ ಗೊಳಿಸುವಂತೆ ಸೂಚಿಸಿದರು.

-ಮನೆ ಕಳೆದುಕೊಂಡವರಿಗೆ ಮೊದಲ ಕಂತಿನ 1 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದ ಕುರಿತು ಫಲಾನುಭವಿಗಳಿಗೆ ಪತ್ರ ಬರೆದು ಮಾಹಿತಿ ನೀಡಿ, ಮನೆ ನಿರ್ಮಿಸುವಂತೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

-ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚವಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

*************