ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹುಳಿಮಾವು ದುರಂತ: ಬಡ ಕುಟುಂಬಗಳಿಗೆ 50,000 ರೂ.ಗಳ ಪರಿಹಾರ - ಮುಖ್ಯಮಂತ್ರಿ

know_the_cm

(ಬೆಂಗಳೂರು), ನವೆಂಬರ್ 26, 2019

-ಹುಳಿಮಾವು ಕೆರೆ ಅನಾಹುತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳಿಗೆ ಪರಿಹಾರ ಧನವಾಗಿ ತಲಾ 50,000 ರೂ. ಗಳನ್ನು ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

-ಹುಳಿಮಾವು ಕೆರೆ ಅನಾಹುತದಿಂದ ನೆಲೆ ಕಳೆದುಕೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಅನಾಹುತದಿಂದಾಗಿ ಒಟ್ಟು 630 ಮನೆಗಳು ಹಾನಿಗೊಳಗಾಗಿವೆ. ಈ ಪೈಕಿ ಬಡವರ ಮನೆಗಳು ಸಂಪೂರ್ಣ ನಾಶವಾಗಿವೆ. ನಿರಾಶ್ರಿತರ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟ ವಸತಿ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ನೆರವನ್ನು ಒದಗಿಸಲಾಗುತ್ತಿದೆ ಎಂದರು.

know_the_cm

-ಹಾನಿಗೊಳಗಾಗಿರುವ ಪ್ರದೇಶದಲ್ಲಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರು ಹಾಗು ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಶಾಸಕರು, ಪಾಲಿಕೆ ಸದಸ್ಯರು ಹಾಗು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಹಾಗೂ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

know_the_cm

-ಈ ಸಂದರ್ಭದಲ್ಲಿ ಶಾಸಕ ಎಂ. ಕೃಷ್ಣಪ್ಪ, ಬಿಬಿಎಂಪಿ ಮಹಾಪೌರರಾದ ಎಂ.ಗೌತಮ್ ಕುಮಾರ್, ನಗರ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಉಪಸ್ಥಿತರಿದ್ದರು.

*************