ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಮೃದ್ಧಿ ಕರ್ನಾಟಕ ನಮ್ಮ ಗುರಿ - ಮುಖ್ಯಮಂತ್ರಿ

know_the_cm

(ಬೆಳ್ತಂಗಡಿ), ಡಿಸೆಂಬರ್ 08, 2019

-ಮುಂದಿನ ಮೂರುವರೆ ವರ್ಷ ಸ್ಥಿರ ಸರಕಾರ ನೀಡಿ ರಾಜ್ಯವನ್ನು ಸಮೃದ್ಧಿಯಡೆಗೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

-ಅವರು ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸುಮಾರು 347 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಉಜಿರೆ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ಮಾತನಾಡಿದರು.

know_the_cm

-ರಾಜ್ಯವನ್ನು ಮಾದರಿಯನ್ನಾಗಿ ಮಾಡುವುದು ನನ್ನ ಇಚ್ಚೆ. ಈ ನಿಟ್ಟಿನಲ್ಲಿ ಸರ್ವರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರಗತಿಯನ್ನು ತೀವ್ರಗೊಳಿಸಿ ಜನತೆಯಲ್ಲಿ ನೆಮ್ಮದಿ ಮೂಡಿಸುವುದು ಸರಕಾರದ ಧ್ಯೇಯವಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

-ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅತಿವೃಷ್ಟಿ ಸಂದರ್ಭದಲ್ಲಿ ಜನತೆ ಸರಕಾರಕ್ಕೆ ಬಹಳ ನೆರವು ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳವು ಅತಿವೃಷ್ಟಿ ಸಂದರ್ಭದಲ್ಲಿ ಸುಮಾರು 25 ಕೋಟಿ ರೂಪಾಯಿ ನೆರವು ನೀಡಿದ್ದು, ಸರಕಾರ ಇದಕ್ಕೆ ಕೃತಜ್ಞಾಪೂರ್ವಕವಾಗಿದೆ ಎಂದ ಮುಖ್ಯಮಂತ್ರಿಗಳು, ನೆರೆ ಸಂತ್ರಸ್ತರಿಗೆ ರಾಜ್ಯ ಸರಕಾರ ಎಲ್ಲ ನೆರವು ನೀಡುತ್ತಾ ಬಂದಿದೆ ಎಂದು ಯಡಿಯೂರಪ್ಪ ಹೇಳಿದರು.

-ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಒಡಿಯೂರು ಎಂಬಲ್ಲಿ ಶನಿವಾರ ಗುಡ್ಡ ಕುಸಿದು ಸಾವನ್ನಪ್ಪಿದವರಿಗೆ ತಲಾ ಮೂರು ಲಕ್ಷ ರೂ.ಪರಿಹಾರ ಮಂಜೂರು ಮಾಡಲಾಗುವುದು.

-ಬೆಳ್ತಂಗಡಿ ತಾಲೂಕಿನ ಕಣಿಯೂರು ನಲ್ಲಿ ಹೋಬಳಿ ಕೇಂದ್ರ ಸ್ಥಾಪಿಸಲಾಗುವುದು.

-ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಗಳು ಪ್ರಕಟಿಸಿದರು.

-ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆ ವಹಿಸಿದ್ದರು.

-ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ, ಶಾಸಕರಾದ ಸಂಜೀವ ಮಟಂದೂರು, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಮತ್ತಿತರರು ಇದ್ದರು.

*************