ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬಿಡಿಎ ಕಾಮಗಾರಿಗಳ ತನಿಖೆ: ಹೈಕೋರ್ಟ್ ಆದೇಶಕ್ಕೆ ಮುಖ್ಯಮಂತ್ರಿಗಳ ಸ್ವಾಗತ

know_the_cm

(ಬೆಂಗಳೂರು), ಡಿಸೆಂಬರ್ 17, 2019

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ರಾಜ್ಯದ ಉಚ್ಛ ನ್ಯಾಯಾಲಯವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸಿದ್ದಾರೆ.

-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ಜತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಳೆದ ಒಂದೆರಡು ವರ್ಷಗಳ ಗುತ್ತಿಗೆ ಕೆಲಸಗಳ ತನಿಖೆಯೂ ಆಗಬೇಕು ಎಂದು ಹೇಳಿದ್ದಾರೆ.

-ಬಿಡಿಎ ಮತ್ತು ಬಿಬಿಎಂಪಿಯಲ್ಲಿ ಅನೇಕ ಕಾಮಗಾರಿಗಳು, ಅದರಲ್ಲೂ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಆದ್ದರಿಂದ ತನಿಖೆ ಸಮಗ್ರವಾಗಿರಬೇಕಲ್ಲದೆ ಎಸಿಬಿಯು ಆರು ತಿಂಗಳು ಗಡುವಿಗೆ ಕಾಯದೆ, ಆದಷ್ಟೂ ಬೇಗ ವರದಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

-ಯಾವ್ಯಾವ ಕಾಮಗಾರಿಗಳು ಕಳಪೆ ಎನ್ನುವುದು ಗೊತ್ತಾದರೆ ಅವುಗಳಿಗೆ ಸರ್ಕಾರ ನೀಡುವ ಹಣವನ್ನು ತಡೆ ಹಿಡಿಯಬಹುದು, ಸರ್ಕಾರ ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗೆ ಆಸ್ಪದ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರವು ಬಿಡಿಎ ಮತ್ತು ಬಿಬಿಎಂಪಿ ಕಾಮಗಾರಿಗಳ, ಅದರಲ್ಲೂ ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಅತ್ಯಂತ ವಿಶೇಷವಾಗಿ ಮತ್ತು ಸೂಕ್ಷ್ಮವಾಗಿ ಗಮನಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

*************