ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ - ಮುಖ್ಯಮಂತ್ರಿ

know_the_cm

(ಉಡುಪಿ), ಡಿಸೆಂಬರ್ 25, 2019

-ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಲು ಸಂಸ್ಕಾರಯುತ ಶಿಕ್ಷಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಹೇಳಿದರು.

-ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಚಿಣ್ಣರ ಮಾಸೋತ್ಸವ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಾಣಗೊಂಡಿರುವ ಶೌಚಾಲಯ ಸಮುಚ್ಚಯ ಉದ್ಘಾಟಿಸಿ ಮಾತನಾಡಿದರು.

-ವಿದ್ಯಾರ್ಥಿಗಳು ಭತ್ತವನ್ನು ತುಂಬುವ ಚೀಲಗಳಾಗದೆ ಭತ್ತವನ್ನು ಬೆಳೆಯುವ ಗದ್ದೆಗಳಾಗಬೇಕು ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ಮಕ್ಕಳು ಶುದ್ಧ ಪರಿಸರದಲ್ಲಿ ಆರೋಗ್ಯಯುತರಾಗಿ ಬಾಳಬೇಕು. ಉಡುಪಿ ಕೃಷ್ಣ ಮಠವು ಮಾಡುತ್ತಿರುವ, ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮ ಶ್ಲಾಘನೀಯ ಎಂದರು.

-ರಾಜ್ಯ ಸರಕಾರ ಬಿಸಿಯೂಟ ಯೋಜನೆ ಜಾರಿಗೆ ತರುವ ಮೊದಲೇ ಕೃಷ್ಣ ಮಠವು ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ, ಸುಮಾರು 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿನಿತ್ಯ ಬಿಸಿಯೂಟ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಸ್ವಚ್ಛ ಭಾರತ ಯೊಜನೆಗೆ ಕೃಷ್ಣ ಮಠದ ಕೊಡುಗೆ ಅಪಾರವಾಗಿದೆ. ಇದು ದೇಶಕ್ಕೆ ಮಾದರಿ ಎಂದು ನುಡಿದರು.

-ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಗದೀಶ್, ಎಂ.ಆರ್.ಪಿ.ಎಲ್. ಸಂಸ್ಥೆಯ ಅಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.

know_the_cm

ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

know_the_cm

know_the_cm

*************