ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಮನಗರ ಜಿಲ್ಲೆ ಮರುನಾಮಕರಣ ಪ್ರಸ್ತಾವ ಇಲ್ಲ- ಮುಖ್ಯಮಂತ್ರಿ ಸ್ಪಷ್ಟನೆ

know_the_cm

(ಬೆಂಗಳೂರು), ಜನವರಿ 05, 2020

-ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

-"ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಯಾವುದೇ ಹುರುಳಿಲ್ಲದ ಚರ್ಚೆಯಲ್ಲಿ ತೊಡಗಿದ್ದಾರೆ. ಬಹುಶ: ಆ ಎರಡೂ ಪಕ್ಷಗಳ ನಾಯಕರು ಸುದ್ದಿಯಲ್ಲಿರಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ.

-ಶ್ರೀರಾಮನ ಬಗ್ಗೆ ನಮಗಿರುವ ಭಕ್ತಿ ಅಥವಾ ಅಭಿಮಾನವನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ.ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಈಗ ರಾಮನ ಬಗ್ಗೆ ಭಕ್ತಿ ಹುಟ್ಟಿರುವುದು ಆಶ್ಚರ್ಯಕರ. ಅವರ ಭಕ್ತಿ ನಿಜವಾಗಿದ್ದರೆ ಸ್ವಾಗತಾರ್ಹ. ಇಲ್ಲದ ವಿಷಯದ ಬಗ್ಗೆ ಆ ಪಕ್ಷಗಳ ನಾಯಕರು ಹೋರಾಡಲು ಹೊರಟಿರುವುದು ಹಾಸ್ಯಾಸ್ಪದ." ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

*************