ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮುಖ್ಯಮಂತ್ರಿ ನೇತೃತ್ವದ ನಿಯೋಗ ಭಾಗಿ

know_the_cm

(ಬೆಂಗಳೂರು), ಜನವರಿ 19, 2020

-ಸ್ವಿಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗ ಭಾಗವಹಿಸಲಿದ್ದು, ಮುಖ್ಯಮಂತ್ರಿಗಳು ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ.

-ಈ ಸಮಾವೇಶವು ಜ.20 ರಿಂದ 25ರವರೆಗೆ ನಡೆಯಲಿದ್ದು, 40ಕ್ಕೂ ಹೆಚ್ಚು ಜಾಗತಿಕ ಮಟ್ಟದ ಕಂಪನಿಗಳ ಜತೆಯಲ್ಲಿ ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಜತೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ 9 ಅಧಿಕಾರಿಗಳ ತಂಡ ಇರಲಿದೆ.

-ವಿಶ್ವಾದ್ಯಂತ ಉದ್ದಿಮೆದಾರರು ಆಗಮಿಸುವ ಈ ಸಮಾವೇಶದಲ್ಲಿಯೇ ಜ.22 ರಂದು ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್)ದ ಕರ್ಟನ್ ರೈಸರ್ ನೆರವೇರಿಸಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. 2020ರ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2020 'ಜಾಗತಿಕ ಹೂಡಿಕೆದಾರರ ಸಮಾವೇಶ'ದ ಘೋಷಣೆ ಮಾಡಲಾಗುತ್ತದೆ. ಜೊತೆಗೆ, ಇನ್ವೆಸ್ಟ್ ಕರ್ನಾಟಕದಲ್ಲಿ ಭಾಗವಹಿಸುವಂತೆ ಪ್ರಮುಖ ನಾಯಕರು ಮತ್ತು ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲಾಗುವುದು.

*************